ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

 ಮೆಟ್ರಿಕ್ ನಂತರದ ಶುಲ್ಕಮರುಪಾವತಿ ಯೋಜನೆ(Post Matric Fee Reimbursement Scheme)ಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅನ್‌ಲೈನ್‌ ಮೂಲಕ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಶುಲ್ಕ ಮರುಪಾವತಿ ಯೋಜನೆಯಡಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ

ಆನ್‌ಲೈನ್ ಅರ್ಜಿ ಆನ್‌ಲೈನ್ ವಿಳಾಸ https://ssp.postmatric.karnataka.gov.in/

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 31.10.2024

ಅರ್ಹತೆಗಳು ಏನು?

1) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
2) ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
3) ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2.00 ಲಕ್ಷಗಳನ್ನು ಮೀರಿರಬಾರದು ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2.5 ಲಕ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

1) ವಿದ್ಯಾರ್ಥಿಯ ಆಧಾರ್ ಕಾರ್ಡ್
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ
3) ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಹಿಂದಿನ ವರ್ಷದ ಅಂಕಪಟ್ಟಿ
4) ಪ್ರಸ್ತುತ ಅಧ್ಯಯನ ಮಾಡುತ್ತಿರುವ ಕೋರ್ಸಿನ ನೋಂದಣಿ ಸಂಖ್ಯೆ (Register Number)
5) ತಂದೆ ಹಾಗೂ ತಾಯಿಯ ಆಧಾರ್ ಕಾರ್ಡ್

 ಇಂತಹ ಹೆಚ್ಚಿನ ಸುದ್ದಿಗಳಿಗೆ ನಮ್ಮ ವಾಟ್ಸಪ್ ಚಾನೆಲ್ ಫಾಲೋ ಮಾಡಿ  

Post a Comment

0 Comments